ರಾಜ್ಯ

ಹಳದಿ ಮೆಟ್ರೋ ಮಾರ್ಗದಲ್ಲಿ ಪ್ರಯಾಣಿಕರಿಗೆ ಅನುಕೂಲ: 9 ನಿಲ್ದಾಣಗಳ ಬಳಿ ಹೊಸ ಬಿಎಂಟಿಸಿ ಬಸ್ ನಿಲ್ದಾಣಗಳು

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಕೊನೆ ಮೈಲಿ ಸಂಪರ್ಕವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಆರ್‌.ವಿ. ರಸ್ತೆ–ಬೊಮ್ಮಸಂದ್ರ ಹಳದಿ ಮಾರ್ಗದ ಒಂಬತ್ತು ಮೆಟ್ರೋ ನಿಲ್ದಾಣಗಳ ಸಮೀಪ ಹೊಸ ಬಿಎಂಟಿಸಿ ಬಸ್ ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಮೆಟ್ರೋ ಹಾಗೂ ಬಸ್ ನಡುವಿನ ಸಂಪರ್ಕ ಸುಗಮವಾಗಿ, ಹೆಚ್ಚಿನ ಪ್ರಯಾಣಿಕರು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಪ್ರೋತ್ಸಾಹ ನೀಡುವ ಗುರಿ ಹೊಂದಲಾಗಿದೆ.

ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಹಾಗೂ ಬಿಎಂಟಿಸಿ ಸಂಯುಕ್ತವಾಗಿ ಮಾರ್ಗ ಪರಿಶೀಲನೆ ನಡೆಸಿದ್ದು, ಅದರ ಆಧಾರದಲ್ಲಿ ಕೆಲವೆಡೆ ಹೊಸ ಬಸ್ ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. ಜೊತೆಗೆ, ಕೆಲವು ಹಳೆಯ ಬಸ್ ನಿಲ್ದಾಣಗಳನ್ನು ಮೆಟ್ರೋ ನಿಲ್ದಾಣಗಳಿಗೆ ಸಮೀಪವಾಗುವಂತೆ ಸ್ಥಳಾಂತರಿಸಲಾಗಿದೆ.

ಹೆಬ್ಬಗೋಡಿ, ಬೆರೆಟೇನ ಅಗ್ರಹಾರ, ಸಿಂಗಸಂದ್ರ, ಹೊಂಗಸಂದ್ರ, ಸೆಂಟ್ರಲ್ ಸಿಲ್ಕ್ ಬೋರ್ಡ್ ಹಾಗೂ ಆರ್‌.ವಿ. ರಸ್ತೆ ಮೆಟ್ರೋ ನಿಲ್ದಾಣಗಳ ಬಳಿ ಹೊಸದಾಗಿ ಬಿಎಂಟಿಸಿ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಇನ್ನು ಎಲೆಕ್ಟ್ರಾನಿಕ್ ಸಿಟಿ, ಹೊಸ ರಸ್ತೆ ಮತ್ತು ರಾಗಿಗುಡ್ಡ ಮೆಟ್ರೋ ನಿಲ್ದಾಣಗಳ ಬಳಿ 100 ಮೀಟರ್‌ಗೂ ಹೆಚ್ಚು ದೂರದಲ್ಲಿದ್ದ ಬಸ್ ನಿಲ್ದಾಣಗಳನ್ನು ಮೆಟ್ರೋ ನಿಲ್ದಾಣದ ಸಮೀಪಕ್ಕೆ ಸ್ಥಳಾಂತರಿಸಲಾಗಿದೆ.

ಇದಲ್ಲದೆ, ಜಯದೇವ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಕುಡ್ಡು ಗೇಟ್, ಇನ್ಫೋಸಿಸ್ ಫೌಂಡೇಶನ್ ಮತ್ತು ಕೋಣಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಗಳ 100 ಮೀಟರ್ ವ್ಯಾಪ್ತಿಯೊಳಗೆ ಈಗಾಗಲೇ ಬಸ್ ನಿಲ್ದಾಣಗಳು ಲಭ್ಯವಿವೆ. ಆದರೆ ಹಸ್ಕೂರು ರಸ್ತೆ ಹಾಗೂ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳದ ಕೊರತೆಯಿಂದ ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ.

ಈ ಹೊಸ ಹಾಗೂ ಸುಧಾರಿತ ಬಸ್ ಸಂಪರ್ಕವನ್ನು ಮೆಟ್ರೋ ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮನವಿ ಮಾಡಿದೆ.

Related posts

ಕರ್ನಾಟಕಕ್ಕೆ ಬಿಡದ ಮಳೆ ಕಾಟ: ಇನ್ನೂ 5 ದಿನ ಮಳೆ ಮುಂದುವರಿಕೆ, 7 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್‌’ ಘೋಷಣೆ!

ಬಿಜೆಪಿ ಮನೆಯೊಂದು ಐದು ಬಾಗಿಲು: ಬಿಹಾರದ ಗೆಲುವು, ಕರ್ನಾಟಕದ ಪಾಠ! ಒಡಕಿನ ವಿಪಕ್ಷಕ್ಕೆ ಮುಂದೇನು ಗತಿ?

admin@kpnnews.com

ಜನೌಷಧಿ ಕೇಂದ್ರಗಳ ಬೆಳವಣಿಗೆಯಲ್ಲಿ ದಕ್ಷಿಣ ರಾಜ್ಯಗಳ ಮುನ್ನಡೆ

digitalbharathi24@gmail.com
Latest news
ಬೆಳಗಾವಿ ಚಳಿಗಾಲದ ಅಧಿವೇಶನ: 10 ದಿನಗಳಲ್ಲಿ 23 ವಿಧೇಯಕಗಳಿಗೆ ಅಂಗೀಕಾರ ರಾಜ್ಯಸಭೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ; ವಿಪಕ್ಷಗಳ ತೀವ್ರ ಆಕ್ರೋಶ ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ; ಶುಭ್‌ಮನ್ ಗಿಲ್ ಹೊರಗೆ, ಇಶಾನ್ ಕಿಶಾನ್‌ಗೆ ಕಂಬ್ಯಾಕ್ ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರಿದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ... ಬೇಡಿಕೆ ಈಡೇರಿದೆ, ನನ್ನ–ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಬೆಂಬಲದಿಂದಲೇ ಅವರು ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ... ಬೇರೆ ಧರ್ಮದವನನ್ನು ಮದುವೆಯಾದರೆ ಮಗಳಿಗೆ ತಂದೆಯ ಆಸ್ತಿಯಲ್ಲಿ ಹಕ್ಕಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಬೆಳಗಾವಿ ಚಳಿಗಾಲ ಅಧಿವೇಶನ: ಉತ್ತರ–ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೇಂದ್ರದ ನೆರವು ಕೋರಿ ನಿರ್ಣಯಗಳಿಗೆ ವಿಧಾನಸಭೆಯ ಸರ... ಮೋದಿ ಓಮನ್ ಭೇಟಿ… ಪಾಕ್–ಚೀನಾ ಏಕೆ ಪತರಗುಟ್ಟಿವೆ? ಹಿಜಾಬ್ ವಿಚಾರ ತೀವ್ರಗೊಂಡ ಬೆನ್ನಲ್ಲೇ ಸಿಎಂ ನಿತೀಶ್ ಕುಮಾರ್ ವಿರುದ್ಧ ದೂರು: ಬೆದರಿಕೆ ಎಚ್ಚರಿಕೆಯಿಂದ ಭದ್ರತೆ ಮತ್ತಷ್... ‘ಕೈ’ ಕಮಾಂಡ್‌ ತೃಪ್ತಿಗೆ ರಾಜ್ಯದ ಖಜಾನೆ ಖಾಲಿ ಮಾಡುತ್ತಿದ್ದಾರೆ’: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ...