ರಾಜಕೀಯ

ಬೇಡಿಕೆ ಈಡೇರಿದೆ, ನನ್ನ–ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಬೆಂಬಲದಿಂದಲೇ ಅವರು ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್

ಗೋಕರ್ಣ: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಗಳ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನನ್ನ ಮತ್ತು ಮುಖ್ಯಮಂತ್ರಿ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿ ಈ ಒಪ್ಪಂದಕ್ಕೆ ತಂದಿದೆ. ಅದರಂತೆ ನಾವಿಬ್ಬರೂ ನಡೆದುಕೊಂಡು ಹೋಗುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಗೋಕರ್ಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಊಹಾಪೋಹಗಳಿಗೆ ತೆರೆ ಎಳೆದರು. “ಎರಡೂವರೆ ವರ್ಷದ ಒಪ್ಪಂದವಾಗಿದೆ ಎಂಬ ಮಾತು ಸರಿಯಲ್ಲ. ಅವರು ಐದು ವರ್ಷ ಇರಲ್ಲ ಎಂದು ನಾನು ಯಾವತ್ತೂ ಹೇಳಿಲ್ಲ. ಹೈಕಮಾಂಡ್ ಅವರ ಪರ ಇಲ್ಲ ಎಂದು ಸಹ ನಾನು ಹೇಳಿಲ್ಲ. ಹೈಕಮಾಂಡ್ ಅವರ ಪರ ಇರುವುದರಿಂದಲೇ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ” ಎಂದು ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ಆಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನೀವು ಆ ಬಗ್ಗೆ ಚರ್ಚೆ ಮಾಡುತ್ತಿದ್ದೀರಿ. ನಮ್ಮ ಪಕ್ಷದೊಳಗೆ ಅಂತಹ ಯಾವುದೇ ಚರ್ಚೆ ಇಲ್ಲ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ. ಹೈಕಮಾಂಡ್ ತೀರ್ಮಾನವೇ ಅಂತಿಮ” ಎಂದು ತಿಳಿಸಿದರು.

ಹಿಂದಿನ ಬಾರಿ ಗೋಕರ್ಣಕ್ಕೆ ಬಂದಾಗ ತಮ್ಮ ಇಷ್ಟಾರ್ಥ ಸಿದ್ಧಿಯಾಗಿತ್ತು ಎಂದು ಹೇಳಿದ್ದೀರಿ, ಈ ಬಾರಿಯೂ ಹಾಗೇನಾದರೂ ಆಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, “ಅದೆಲ್ಲವನ್ನು ನಾನು ಸಾರ್ವಜನಿಕವಾಗಿ ಹೇಳುವುದಿಲ್ಲ. ಅದು ನನ್ನ ಮತ್ತು ಆ ತಾಯಿ ನಡುವಿನ ವಿಚಾರ. ಭಕ್ತ ಮತ್ತು ಭಗವಂತನ ನಡುವಿನ ಸಂಬಂಧ” ಎಂದು ಹೇಳಿದರು.

ಗೋಕರ್ಣದಲ್ಲಿ ವಿಘ್ನ ನಿವಾರಕ ವಿಘ್ನೇಶ್ವರ, ಮಹಾಬಲೇಶ್ವರ ಹಾಗೂ ಗಂಗಾಧರೇಶ್ವರ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದಾಗಿ ತಿಳಿಸಿದ ಅವರು, “ಐದು ವರ್ಷಗಳ ಹಿಂದೆ ಜಗದೇಶ್ವರಿ ತಾಯಿಯ ಬಳಿ ಪ್ರಾರ್ಥನೆ ಮಾಡಿದ್ದೆ. ಮತ್ತೆ ಇಲ್ಲಿಗೆ ಬರುವೆ ಎಂದು ಸಂಕಲ್ಪ ಮಾಡಿದ್ದೆ. ಅದರಂತೆ ಇಂದು ಬಂದು ಪೂಜೆ ಸಲ್ಲಿಸಿದ್ದೇನೆ. ನನಗೂ ರಾಜ್ಯಕ್ಕೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇನೆ” ಎಂದರು.

“ಇಂದು ದೇವರ ದರ್ಶನದಿಂದ ಸಂತೃಪ್ತಿ ದೊರೆತಿದೆ. ಹಸನ್ಮುಖಿಯಾಗಿ ಇಲ್ಲಿಂದ ತೆರಳುತ್ತಿದ್ದೇನೆ” ಎಂದು ಹೇಳುವ ಮೂಲಕ ತಮ್ಮ ಮಾತುಗಳನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಮುಕ್ತಾಯಗೊಳಿಸಿದರು.

Related posts

ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ: ಶಾಸಕ ಇಕ್ಬಾಲ್ ಹುಸೇನ್ ಬಾಂಬ್ ಹೇಳಿಕೆ

digitalbharathi24@gmail.com

‘ನ್ಯಾಯ ಯಾವತ್ತೂ ಸೋಲದು, ದ್ವೇಷ ರಾಜಕಾರಣ ಹೆಚ್ಚು ದಿನ ನಡೆಯದು’: ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ತೀವ್ರ ವಾಗ್ದಾಳಿ

digitalbharathi24@gmail.com

‘ವಿಜಯೇಂದ್ರನೇ ಕಲೆಕ್ಷನ್ ಕಿಂಗ್; ಯಡಿಯೂರಪ್ಪ ಅವರ ಹೆಸರನ್ನು ಕೆಡಿಸಿದ್ದು ಅವರೇ’ – ಡಿ.ಕೆ.ಶಿವಕುಮಾರ್ ವಾಗ್ದಾಳಿ

digitalbharathi24@gmail.com
Latest news
ಬೆಳಗಾವಿ ಚಳಿಗಾಲದ ಅಧಿವೇಶನ: 10 ದಿನಗಳಲ್ಲಿ 23 ವಿಧೇಯಕಗಳಿಗೆ ಅಂಗೀಕಾರ ರಾಜ್ಯಸಭೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ; ವಿಪಕ್ಷಗಳ ತೀವ್ರ ಆಕ್ರೋಶ ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ; ಶುಭ್‌ಮನ್ ಗಿಲ್ ಹೊರಗೆ, ಇಶಾನ್ ಕಿಶಾನ್‌ಗೆ ಕಂಬ್ಯಾಕ್ ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರಿದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ... ಬೇಡಿಕೆ ಈಡೇರಿದೆ, ನನ್ನ–ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಬೆಂಬಲದಿಂದಲೇ ಅವರು ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ... ಬೇರೆ ಧರ್ಮದವನನ್ನು ಮದುವೆಯಾದರೆ ಮಗಳಿಗೆ ತಂದೆಯ ಆಸ್ತಿಯಲ್ಲಿ ಹಕ್ಕಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಬೆಳಗಾವಿ ಚಳಿಗಾಲ ಅಧಿವೇಶನ: ಉತ್ತರ–ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೇಂದ್ರದ ನೆರವು ಕೋರಿ ನಿರ್ಣಯಗಳಿಗೆ ವಿಧಾನಸಭೆಯ ಸರ... ಮೋದಿ ಓಮನ್ ಭೇಟಿ… ಪಾಕ್–ಚೀನಾ ಏಕೆ ಪತರಗುಟ್ಟಿವೆ? ಹಿಜಾಬ್ ವಿಚಾರ ತೀವ್ರಗೊಂಡ ಬೆನ್ನಲ್ಲೇ ಸಿಎಂ ನಿತೀಶ್ ಕುಮಾರ್ ವಿರುದ್ಧ ದೂರು: ಬೆದರಿಕೆ ಎಚ್ಚರಿಕೆಯಿಂದ ಭದ್ರತೆ ಮತ್ತಷ್... ‘ಕೈ’ ಕಮಾಂಡ್‌ ತೃಪ್ತಿಗೆ ರಾಜ್ಯದ ಖಜಾನೆ ಖಾಲಿ ಮಾಡುತ್ತಿದ್ದಾರೆ’: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ...